ಕರ್ನಾಟಕ

karnataka

ETV Bharat / videos

ವಿಧಾನಮಂಡಲ ಜಂಟಿ ಅಧಿವೇಶನ 2024: ರಾಜ್ಯಪಾಲರ ಭಾಷಣದ ನೇರ ಪ್ರಸಾರ - ಕರ್ನಾಟಕ ಬಜೆಟ್ ಅಧಿವೇಶನ

By ETV Bharat Karnataka Team

Published : Feb 12, 2024, 11:00 AM IST

Updated : Feb 12, 2024, 11:55 AM IST

ಬೆಂಗಳೂರು: ಇಂದಿನಿಂದ ಫೆ.23ರವರೆಗೆ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವಾದ ಇಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡುತ್ತಿದ್ದಾರೆ. ಇನ್ನು ಫೆ.16ರಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

ಹತ್ತು ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಬಲ ಅಸ್ತ್ರಗಳ ಮೂಲಕ ಆಡಳಿತಾರೂಢ ಕಾಂಗ್ರೆಸ್ ಕಟ್ಟಿಹಾಕಲು ಬಿಜೆಪಿ ಜೆಡಿಎಸ್​ ಮೈತ್ರಿಕೂಟ ಸಜ್ಜಾಗಿದೆ. ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಆರೋಪ ಮತ್ತು ಬರ ಪರಿಹಾರದ ಹಣ ಬಿಡುಗಡೆ ಮಾಡದಿರುವ ವಿಷಯವನ್ನೇ ಪ್ರಮುಖವಾಗಿರಿಸಿಕೊಂಡು ಸರ್ಕಾರದ ವಿರುದ್ಧ ಸದನದಲ್ಲಿ ಮೈತ್ರಿಕೂಟ ಹೋರಾಟ ನಡೆಸಲಿದೆ.

ಮಂಗಳವಾರದಿಂದ ಕಲಾಪಗಳು ನಡೆಯಲಿವೆ. ಬಿಜೆಪಿಗೆ ತಕ್ಕ ಪ್ರತ್ತ್ಯುತ್ತರ ನೀಡಲು ಕಾಂಗ್ರೆಸ್ ಕೂಡ ಸಿದ್ಧತೆ ಮಾಡಿಕೊಂಡಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿರುವ ಕಾರಣ ಎರಡೂ ಕಡೆಗಳಿಂದ ಚರ್ಚೆಗೆ ಅಧಿವೇಶನ ಮತ್ತಷ್ಟು ಅನುಕೂಲ ಕಲ್ಪಿಸಿಕೊಡಲಿದೆ.

ಸರ್ಕಾರ ಹಲವು ಸವಾಲುಗಳ ಮಧ್ಯೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ಬಜೆಟ್ ಲೆಕ್ಕಾಚಾರದ ಮೇಲೆ ರಾಜ್ಯದ ಜನರ ಕಣ್ಣು ನೆಟ್ಟಿದೆ.  

Last Updated : Feb 12, 2024, 11:55 AM IST

ABOUT THE AUTHOR

...view details