ಕರ್ನಾಟಕ

karnataka

ಕರ್ನಾಟಕ ಬಜೆಟ್​ ಅಧಿವೇಶನ: ವಿಧಾನಸಭೆ ಕಲಾಪದ ನೇರಪ್ರಸಾರ

By ETV Bharat Karnataka Team

Published : Feb 14, 2024, 10:27 AM IST

Updated : Feb 14, 2024, 7:01 PM IST

ಕರ್ನಾಟಕ ಬಜೆಟ್​ ಅಧಿವೇಶನ: ವಿಧಾನಸಭೆ ಕಲಾಪದ ನೇರಪ್ರಸಾರ

ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನವು ಫೆಬ್ರವರಿ 12 ರಿಂದ ಆರಂಭವಾಗಿದೆ. ಇಂದು ಮೂರನೇ ದಿನದ ಕಲಾಪ ನಡೆಯುತ್ತಿದೆ. ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದ್ದರು. ಫೆಬ್ರವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯ ಮಂಡನೆ ಮಾಡಲಿದ್ದಾರೆ. ಆ ನಂತರ ಫೆ. 23ರ ತನಕ ಸದನದಲ್ಲಿ ಚರ್ಚೆ ನಡೆಯಲಿವೆ. ವಿಧಾನಸಭೆ ಕಲಾಪದ ನೇರಪ್ರಸಾರ ವೀಕ್ಷಿಸಿ.

ಅಧಿವೇಶನದ ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಭಾಷಾ ಬಳಕೆಯನ್ನು ಕಡ್ಡಾಯಗೊಳಿಸುವ ಮಹತ್ವದ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ' ಮಂಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕ ಮಂಡನೆ ಮಾಡಿದ್ದಾರೆ. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್​ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳು ಮತ್ತು ಮುಂತಾದೆಡೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದೆ.

ಇದನ್ನೂ ಓದಿ: ಎತ್ತಿನಹೊಳೆ ಯೋಜನೆ ಶೀಘ್ರ ಜಾರಿ: ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ

Last Updated : Feb 14, 2024, 7:01 PM IST

ABOUT THE AUTHOR

...view details