ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದು ಹೀಗೆ.. - ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
Published : Feb 7, 2024, 10:49 AM IST
ನವದೆಹಲಿ: ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಕರ್ನಾಟಕದ ಸಚಿವ ಕೆಎಚ್ ಮುನಿಯಪ್ಪ ಅವರು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಸಿದ್ದಾರೆ.
"ನಮಗೆ ಸರ್ಕಾರದ ಮೇಲೆ ಕೋಪವಿಲ್ಲ. ಕರ್ನಾಟಕದಲ್ಲಿ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ಕಳುಹಿಸಿದೆ. ಜೊತೆಗೆ ತಜ್ಞರ ಸಮಿತಿಯು ವರದಿಯನ್ನು ಸಲ್ಲಿಸಿದೆ. ಅಂತಿಮವಾಗಿ ಮುಖ್ಯಮಂತ್ರಿಗಳು ಬರ ಪರಿಸ್ಥಿತಿ ಕುರಿತು ಗೃಹ ಸಚಿವರನ್ನು ಭೇಟಿ ಮಾಡಿ ಹಣ ಬಿಡುಗಡೆ ಒತ್ತಾಯ ಮಾಡಿದ್ದೆವು. ಹಣ ಬಿಡುಗಡೆ ಮಾಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದರು. ಇವತ್ತಿನವರೆಗೂ ಹಣ ಬಿಡುಗಡೆ ಮಾಡಿಲ್ಲ. ಹಣ ಪಡೆಯಲು ಎಲ್ಲ ಪ್ರಯತ್ನ ಮಾಡಿದ್ದೇವೆ. ಇದೇ ಕೊನೆಯ ಅಸ್ತ್ರವಾಗಿರುವುದರಿಂದ ಪ್ರತಿಭಟಿನೆಗೆ ಇಳಿದ್ದೇವೆ'' ಎಂದು ಸಚಿವ ಕೆಎಚ್ ಮುನಿಯಪ್ಪ ಹೇಳಿದರು.
ಕಾಂಗ್ರೆಸ್ ನಾಯಕ ಶ್ರೀನಿವಾಸ್ ಬಿವಿ ಮಾತನಾಡಿ, “ಇಂದು ಇಡೀ ಕರ್ನಾಟಕ ಸಚಿವ ಸಂಪುಟವು ಕರ್ನಾಟಕ ಸರ್ಕಾರಕ್ಕೆ ಸರಿಯಾದ ತೆರಿಗೆ ಮೊತ್ತವನ್ನು ಪಾವತಿಸಲು ಒತ್ತಾಯಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲು ದೆಹಲಿಗೆ ಬಂದಿದೆ. ಆದರೆ, ಹಣಕಾಸು ಸಚಿವರು ಚರ್ಚೆಗೆ ಸಿದ್ಧರಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ಸಿಎಂ ಹಾಗೂ ಇತರ ಕಾಂಗ್ರೆಸ್ ನಾಯಕರು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಕೈಗೊಂಡಿದ್ದೇವೆ'' ಎಂದು ಕಿಡಿಕಾರಿದರು.
ಇದನ್ನೂ ಓದಿ: ‘ಚಲೋ ದೆಹಲಿ’: ಜಂತರ್ ಮಂತರ್ನಲ್ಲಿ ಇಂದು ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ