LIVE: ಕರ್ನಾಟಕ ಲೋಕಸಭೆ ಚುನಾವಣೆ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಸುದ್ದಿಗೋಷ್ಠಿ - Lok Sabha Elections
Published : Mar 16, 2024, 5:15 PM IST
|Updated : Mar 16, 2024, 5:45 PM IST
ಬೆಂಗಳೂರು: ಕರ್ನಾಟಕ ಲೋಕಸಭೆ ಚುನಾವಣೆ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನೀತಿ ಸಂಹಿತೆ, ಭದ್ರತೆ, ಬಂದೋಬಸ್ತ್, ತಯಾರಿ ಬಗ್ಗೆ ವಿವರಣೆ ನೀಡುತ್ತಿದ್ದಾರೆ.ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳು, ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಚುನಾವಣೆ ಇರಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 26 ರಂದು 14 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ ಮೇ 07 ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಫಲಿತಾಂಶ ಜೂನ್ 04 ರಂದು ಬರಲಿದೆ.ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಚುನಾವಣೆಗೆ ಅಧಿಸೂಚನೆ ಮಾ.28ಕ್ಕೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಏ.4 ಹಾಗೂ ನಾಮಪತ್ರ ಹಿಂಪಡೆಯುವ ಕೊನೆಯ ದಿನ ಏ.8 ಆಗಿರಲಿದೆ.ಉಡುಪಿ - ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಏಪ್ರಿಲ್ 12 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 22 ಕೊನೆಯ ದಿನವಾಗಿದೆ.ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಸೇರಿ ಒಟ್ಟು 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
Last Updated : Mar 16, 2024, 5:45 PM IST