ಮೂಡಿಗೆರೆ ಶಾಲೆ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪ ಸೆರೆ: ವಿಡಿಯೋ - King Cobra Captured - KING COBRA CAPTURED
Published : Sep 8, 2024, 7:18 PM IST
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಸುಂಕ ಸಾಲೆ ಗ್ರಾಮದ ಸರ್ಕಾರಿ ಶಾಲೆಯ ಆವರಣದ ಪೊದೆಯಲ್ಲಿ ಅವಿತಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞ ಸುರಕ್ಷಿತವಾಗಿ ಸೆರೆ ಹಿಡಿದರು. ಶಾಲೆಗೆ ರಜೆ ಇದ್ದ ಕಾರಣ ಅನಾಹುತ ತಪ್ಪಿತು ಎಂದು ಗ್ರಾಮಸ್ಥರು ನಿಟ್ಟುಸಿರುಬಿಟ್ಟರು.
ಶಾಲೆ ಆವರಣದಲ್ಲಿ ಹಾವು ಇರುವುದನ್ನು ಗಮನಿಸಿದ ಸ್ಥಳೀಯರು, ತಕ್ಷಣ ಕಳಸದ ಉರಗ ತಜ್ಞ ರಿಜ್ವಾನ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಬೃಹತ್ ಗಾತ್ರದ ಹಾವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.
ಸೆರೆಹಿಡಿದ ಕಾಳಿಂಗ ಸರ್ಪ 12 ಅಡಿ ಉದ್ದವಿತ್ತು. ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.
ಮಳೆಗಾಲದಲ್ಲಿ ಹಾವುಗಳು ಕಾಣಿಸಿಕೊಳ್ಳುವುದು ಸಹಜ. ಅದರಲ್ಲೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಬೃಹತ್ ಗಾತ್ರದ ಹಾವುಗಳು ಈ ಹಿಂದೆಯೂ ಪತ್ತೆಯಾದ ಅನೇಕ ನಿದರ್ಶನಗಳಿವೆ.
ಇದನ್ನೂ ಓದಿ: ಜನರಲ್ಲಿ ಭಯ ಹುಟ್ಟಿಸಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - king cobra captured