ಚಲಿಸುತ್ತಿದ್ದ ಸಾರಿಗೆ ಬಸ್ನ ಬ್ರೇಕ್ ಫೇಲ್; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರಿ ಅನಾಹುತ - Bus brake failure - BUS BRAKE FAILURE
Published : Jun 18, 2024, 10:54 PM IST
ಮೈಸೂರು: ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ಜಮೀನಿಗೆ ನುಗ್ಗಿದ ಘಟನೆ ನಂಜನಗೂಡು ತಾಲೂಕಿನ ದೇವರಾಯಶೆಟ್ಟಿಪುರ ಬಳಿ ಮಂಗಳವಾರ ನಡೆದಿದೆ. ಹೆಚ್.ಡಿ. ಕೋಟೆ ಘಟಕಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ ಬೇಗೂರಿನಿಂದ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಮಾರ್ಗವಾಗಿ ಹೆಚ್. ಡಿ ಕೋಟೆಗೆ ತೆರಳುತ್ತಿತ್ತು. ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿದೆ. ಎಚ್ಚೆತ್ತ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಅನ್ನು ಸಮೀಪದ ಜಮೀನಿಗೆ ನುಗ್ಗಿಸಿ ಜನರ ಜೀವ ಉಳಿಸಿದ್ದಾರೆ. ಚಾಲಕನ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲೂ ನಡೆದಿತ್ತು ಇಂತಹದ್ದೇ ಘಟನೆ: ಇತ್ತೀಚಿಗೆ, ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದರ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಿಂದ ತಪ್ಪಿದ ಘಟನೆ ನಡೆದಿತ್ತು. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿತ್ತು. ಇದನ್ನು ಅರಿತ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ರಸ್ತೆಬದಿಯ ಡಿವೈಡರ್ಗೆ ಡಿಕ್ಕಿ ಹೊಡೆಸಿ ಬಸ್ ನಿಲ್ಲುವಂತೆ ಮಾಡಿದ್ದರು.
ಇದನ್ನೂ ಓದಿ: Watch: ಕಾರ್ ಶೋರೂಂ ಆವರಣದಲ್ಲಿ ಅಗ್ನಿ ಅವಘಡ; ವಾಹನಗಳು ಸುಟ್ಟು ಭಸ್ಮ - Fire at Car Showroom