ಮೈಸೂರು: ಪಂಪ್ಸೆಟ್ ಮನೆಯಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಚಿರತೆ - leopard gave birth to three cubs
Published : Mar 18, 2024, 9:11 PM IST
ಮೈಸೂರು: ಪಂಪ್ ಸೆಟ್ ಮನೆಯೊಂದರಲ್ಲಿ ಮೂರು ಚಿರತೆ ಮರಿಗಳು ಪತ್ತೆ ಆಗಿರುವ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಧರಣಿ ಎಂಬುವರ ಪಂಪ್ ಸೆಟ್ ಮನೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದೆ.
ತಾಯಿ ಚಿರತೆ ಮೂರು ಚಿರತೆ ಮರಿಗಳಿಗೆ ಜನ್ಮ ನೀಡಿದೆ. ಪಂಪ್ಸೆಟ್ ಮನೆಗೆ ಹೋದ ಸಂದರ್ಭದಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಇದನ್ನು ಕಂಡ ಧರಣಿ ಎಂಬುವರು ಆತಂಕಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಮರಿಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
ಇನ್ನು ಈ ಭಾಗದಲ್ಲಿ ಕಳೆದ ಮೂರು ನಾಲ್ಕು ತಿಂಗಳುಗಳಿಂದ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ಇದರಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ನೀರಿನ ಪಾತ್ರೆಯೊಳಗೆ ಸಿಲುಕಿದ ತಲೆ, ಒದ್ದಾಡಿದ ಚಿರತೆ: 5 ಗಂಟೆಗಳ ಪ್ರಯತ್ನದ ಬಳಿಕ ರಕ್ಷಣೆ