
ಬಿಜೆಪಿಯವರು ಕಪಟ ನಾಟಕ ಬಿಟ್ಟು ಬರ ಪರಿಹಾರ ಕೊಡಿಸಲಿ: ಡಿಸಿಎಂ ಡಿಕೆಶಿ - DK Shivakumar

Published : Mar 10, 2024, 12:38 PM IST
ಬೆಂಗಳೂರು: ''ಪ್ರತಿಪಕ್ಷ ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇದ್ದರೆ, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸಲಿ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ''ನರೇಗಾ ಯೋಜನೆಯಲ್ಲಿ ಮಾನವ ಕೂಲಿ ದಿನಗಳನ್ನು 100 ರಿಂದ 150ಕ್ಕೆ ಏರಿಸಲಿ. ಅದನ್ನು ಬಿಟ್ಟು ರಾಜಕೀಯ ಹೇಳಿಕೆ ನೀಡುವುದು ಬೇಡ. ಕಪಟ ನಾಟಕ ಬಿಟ್ಟು ಈ ಕೆಲಸ ಮಾಡಲಿ'' ಎಂದರು.
ಇನ್ನೊಂದೆಡೆ, ಬಿಜೆಪಿ ಸೋಮವಾರ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದೆ. ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ತಮ್ಮನ್ನು ಸೀಮಿತಗೊಳಿಸಿದ್ದಾರೆ. ಬೆಂಗಳೂರಿನ ನೀರಿನ ಸಮಸ್ಯೆಯತ್ತ ಗಮನ ಕೊಡುತ್ತಿಲ್ಲ. ಕುಡಿಯುವ ನೀರಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.
ಬಿಜೆಪಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ: ಸಮಗ್ರ ಕೃಷಿಗೆ ಒತ್ತು ನೀಡಿದ ರಾಜ್ಯ ಸರ್ಕಾರ: ರೈತ ಸೌರಶಕ್ತಿ ಮೇಳ ವೀಕ್ಷಿಸಿದ 5 ಸಾವಿರಕ್ಕೂ ಹೆಚ್ಚು ರೈತರು