ಕೇಂದ್ರ ಬಜೆಟ್ ಅಧಿವೇಶನ: ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ- LIVE - PARLIAMENT BUDGET SESSION
Published : Jan 31, 2025, 11:05 AM IST
|Updated : Jan 31, 2025, 1:03 PM IST
ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ. ರಾಷ್ಟ್ರಪತಿಗಳ ಭಾಷಣದ ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ನಾಳೆ ಸಚಿವೆ (ಫೆ.1) 8ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಸೋಮವಾರದಿಂದ ಸಂಸತ್ನ ಎರಡೂ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲೆ ಚರ್ಚೆ ಆರಂಭವಾಗಲಿದೆ.ಲೋಕಸಭೆಯಲ್ಲಿ ಫೆ.3 ಮತ್ತು 4ರಂದು ಎರಡು ದಿನ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ಚರ್ಚೆಗೆ ಅವಕಾಶ ನೀಡಲಾಗಿದೆ. ರಾಜ್ಯಸಭೆಯಲ್ಲಿ ಮೂರು ದಿನ ಚರ್ಚೆಗೆ ಅವಕಾಶವಿದೆ. ಫೆ.6ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಚರ್ಚೆಗೆ ಉತ್ತರಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ಭಾಗ 9 ದಿನಗಳ ಕಾಲ ಅಂದರೆ ಜನವರಿ 31ರಿಂದ ಫೆಬ್ರವರಿ 13ರವರೆಗೆ ನಡೆಯಲಿದೆ. ಇದಾದ ಬಳಿಕ ಮತ್ತೆ ಫೆಬ್ರವರಿ 13ರಿಂದ ಸದನ ಆರಂಭವಾಗಲಿದ್ದು ಮಾರ್ಚ್ 10ಕ್ಕೆ ಬಜೆಟ್ ಪ್ರಕ್ರಿಯೆ ಮುಕ್ತಾಯವಾಗಲಿದೆ. ಏಪ್ರಿಲ್ 4ರಂದು ಅಧಿವೇಶನ ಮುಕ್ತಾಯವಾಗುತ್ತದೆ. ಒಟ್ಟಾರೆ 27 ದಿನಗಳ ಬಜೆಟ್ ಅಧಿವೇಶನ ಇದಾಗಿದೆ.
Last Updated : Jan 31, 2025, 1:03 PM IST