ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ: ಸಿಎಂ, ಡಿಸಿಎಂ ಭಾಗಿ - ನೇರ ಪ್ರಸಾರ - RAJYOTSAVA AWARD CEREMONY
Published : Nov 1, 2024, 6:14 PM IST
|Updated : Nov 1, 2024, 8:38 PM IST
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ–2024 ಮತ್ತು ಕರ್ನಾಟಕ ಸಂಭ್ರಮ–50ರ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದ ನೇರ ಪ್ರಸಾರ ಇಲ್ಲಿದೆ. ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್ ಸೇರಿ ಗಣ್ಯರು ಉಪಸ್ಥಿತರಿದ್ದಾರೆ.ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದಾಗಿ ಒಟ್ಟು 169 ಸಾಧಕರಿಗೆ ಈ ಬಾರಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು 50 ಸಾವಿರ ರೂಪಾಯಿಯಿಂದ 1 ಲಕ್ಷ ರೂಪಾಯಿಗೆ ಏರಿಸಿರುವುದು ಮತ್ತೊಂದು ಗಮನಾರ್ಹದ ಸಂಗತಿಯಾಗಿದೆ.
Last Updated : Nov 1, 2024, 8:38 PM IST