ಬೆಳಗಾವಿ ಬೃಹತ್ ಸಮಾವೇಶದಲ್ಲಿ ಮೋದಿ - LIVE - Modi Election Rally - MODI ELECTION RALLY
Published : Apr 28, 2024, 11:22 AM IST
|Updated : Apr 28, 2024, 12:05 PM IST
ಬೆಳಗಾವಿ: ನಗರದ ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿ ಮೈದಾನದಲ್ಲಿ ಇಂದು ಆಯೋಜಿಸಿರುವ ಬೃಹತ್ ಲೋಕಸಭಾ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿಗಳ ಪರ ಅವರು ಮತಬೇಟೆ ನಡೆಸುತ್ತಿದ್ದಾರೆ. ವೇದಿಕೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್, ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಸೇರಿದಂತೆ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ, ಸಂಸದೆ ಮಂಗಳಾ ಅಂಗಡಿ, ಪ್ರಭಾಕರ್ ಕೋರೆ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಹಲವರು ಹಾಜರಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಕ್ಷೇತ್ರದ 1 ಲಕ್ಷಕ್ಕೂ ಅಧಿಕ ಸಂಖ್ಯೆಯ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಎಲ್ಲೆಡೆ ಮೋದಿ ಪರ ಘೋಷಣೆಗಳನ್ನು ಬಿಜೆಪಿ ಕಾರ್ಯಕರ್ತರು ಕೂಗುತ್ತಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯೇ ಬೆಳಗಾವಿಗೆ ಆಗಮಿಸಿ ಐಟಿಸಿ ವೆಲ್ಕಮ್ ಹೋಟೆಲ್ನಲ್ಲಿ ಮೋದಿ ವಾಸ್ತವ್ಯ ಹೂಡಿದ್ದರು. ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳ ಪರ ಮತಯಾಚನೆ ಬಳಿಕ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ನಂತರ ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ನಮೋ ಪ್ರಚಾರ ಕೈಗೊಳ್ಳುತ್ತಿದ್ದಾರೆ.
Last Updated : Apr 28, 2024, 12:05 PM IST