ಲೋಕಸಭಾ ಚುನಾವಣೆಗೆ ಸೂಕ್ತ ಬಂದೋಬಸ್ತ್: ಡಿಜಿ & ಐಜಿಪಿ ಅಲೋಕ್ ಮೋಹನ್ - DG IGP Alok Mohan
Published : Apr 2, 2024, 6:37 PM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೂಕ್ತ ಭದ್ರತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.
ಕೋರಮಂಗಲದ ಕೆಎಸ್ಆರ್ಪಿ ಪರೇಡ್ ಮೈದಾನದಲ್ಲಿ ಇಂದು ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಅವರು ಭದ್ರತಾ ವಿಷಯದ ಕುರಿತು ಪ್ರತಿಕ್ರಿಯಿಸಿದರು.
ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಾಗೂ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಕೇಂದ್ರದಿಂದ ಒಟ್ಟು ಹದಿನೈದು ತಂಡಗಳು ಬಂದಿವೆ. ಸಾಕಷ್ಟು ಬಂದೋಬಸ್ತ್ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೌಡಿಗಳ ಮನೆ ಮೇಲೆ ದಾಳಿ ಮಾಡಲಾಗಿದೆ. ಕೆಲವು ರೌಡಿಗಳಿಂದ ಸಿಆರ್ಪಿಸಿ 110 ಅಡಿ ಹೇಳಿಕೆ ದಾಖಲು ಮಾಡಿಕೊಂಡು ಎಚ್ಚರಿಕೆ ನೀಡಲಾಗಿದೆ ಎಂದರು.
ರಾಜಕೀಯ ನಾಯಕರೊಂದಿಗೆ ಗುರುತಿಸಿಕೊಂಡ ರೌಡಿಗಳಿಗೆ ಎಚ್ಚರಿಕೆ ನೀಡಲಾಗುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ರೌಡಿಗಳು ರೌಡಿಗಳೇ, ಪೊಲೀಸ್ ದಾಖಲೆಗಳಲ್ಲಿ ರೌಡಿ ಎಂದಿರುವ ಎಲ್ಲರಿಗೂ ಎಚ್ಚರಿಕೆ ನೀಡಲಾಗುತ್ತಿದೆ. ಕಾನೂನಿನನ್ವಯ ಎಲ್ಲರೂ ಒಂದೇ. ಯಾರನ್ನೂ ಬಿಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಇದನ್ನೂ ಓದಿ: ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದ ಸಿಎಂ; ರಾಜಕೀಯ ನಿವೃತ್ತಿ ಬಗ್ಗೆ ಸಿದ್ದರಾಮಯ್ಯ ಸುಳಿವು - CM Siddaramaiah