ಕರ್ನಾಟಕ

karnataka

ETV Bharat / videos

ನವಿ ಮುಂಬೈನಲ್ಲಿ ಬಹುಮಹಡಿ ಕಟ್ಟಡದ 27ನೇ ಮಹಡಿಯಲ್ಲಿ ಅಗ್ನಿ ಅವಘಡ - Fire accident

By ETV Bharat Karnataka Team

Published : Feb 6, 2024, 7:41 AM IST

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಬಹುಮಹಡಿ ಕಟ್ಟಡದ 27 ನೇ ಮಹಡಿಯಲ್ಲಿ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಹಾಗೂ ಯಾರೂ ಕೂಡ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ. ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಪ್ರಸ್ತುತ ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಘಟನೆ, ಐದು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ಮುಂಬೈನಲ್ಲಿರುವ ಝವೇರಿ ಬಜಾರ್ ಪ್ರದೇಶದಲ್ಲಿರುವ 5 ಅಂತಸ್ತಿನ ಕಟ್ಟಡದಲ್ಲಿ ಇತ್ತೀಚೆಗೆ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ 12ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದರು. ಕಟ್ಟಡದಲ್ಲಿ ಸಿಲುಕಿದ್ದ 50 ರಿಂದ 60 ಜನರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿತ್ತು. ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. 

ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ; ಕವಿತಾ ವಿಚಾರಣೆಗೆ ಹಾಜರಾಗುತ್ತಿಲ್ಲ, ಸುಪ್ರೀಂಗೆ ಇಡಿ ವಿವರಣೆ 

ABOUT THE AUTHOR

...view details