ಕರ್ನಾಟಕ

karnataka

ETV Bharat / videos

LIVE - ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶ: ರಾಹುಲ್ ಗಾಂಧಿ, ಖರ್ಗೆ ಭಾಗಿ - Shivamogga Congress Rally - SHIVAMOGGA CONGRESS RALLY

By ETV Bharat Karnataka Team

Published : May 2, 2024, 1:21 PM IST

Updated : May 2, 2024, 2:43 PM IST

ಶಿವಮೊಗ್ಗ: ಲೋಕಸಭೆ ಚುನಾವಣೆಯ ಪ್ರಚಾರದ ಅಂಗವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ ಅವರು ಶಿವಮೊಗ್ಗದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಅವರ ಪರ ಕಾಂಗ್ರೆಸ್ ನಾಯಕರು ಮತಯಾಚಿಸಲಿದ್ದಾರೆ.ಶಿವಮೊಗ್ಗದ ಫ್ರೀಡಂ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಬೃಹತ್‌ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸೇರಿದಂತೆ ಇನ್ನಿತರ ಪ್ರಮುಖರು ಭಾಗವಹಿಸಿದ್ದಾರೆ. ಕಾರ್ಯಕ್ರಮದ ಬಳಿಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ರಾಯಚೂರಿಗೆ ತೆರಳಿ, ಅಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಕಾರ್ಯಕ್ರಮದ ಹಿನ್ನೆಲೆ ಈಗಾಗಲೇ ವೇದಿಕೆ, ಕಾರ್ಯಕರ್ತರಿಗೆ, ಮುಖಂಡರಿಗಾಗಿ ಆಸನ ವ್ಯವಸ್ಥೆ, ಹಾಗೂ ಎಲ್‌ಸಿಡಿ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಕಾಂಗ್ರೆಸ್​ ನಾಯಕರ ಆಗಮನ ಹಿನ್ನೆಲೆ ನಗರದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಬಿಗಿ ಪೊಲೀಸ್ ಬಂದೋ‌ಬಸ್ತ್ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.ರಾಜ್ಯದಲ್ಲಿ ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಎರಡನೇ ಹಂತದಲ್ಲಿ ಮೇ 7ರಂದು ಶಿವಮೊಗ್ಗ ಸೇರಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 
Last Updated : May 2, 2024, 2:43 PM IST

ABOUT THE AUTHOR

...view details