ತೆಲಂಗಾಣದಲ್ಲಿ ಮಾರ್ಗದರ್ಶಿ ಚಿಟ್ ಫಂಡ್ನ ಮತ್ತೊಂದು ಶಾಖೆ ಉದ್ಘಾಟನೆ - MARGADARSI CHIT FUND
Published : Nov 16, 2024, 11:46 AM IST
|Updated : Nov 16, 2024, 12:33 PM IST
ರಾಮೋಜಿ ಗ್ರೂಪ್ ಸಂಸ್ಥಾಪಕರಾದ ದಿವಂಗತ ರಾಮೋಜಿ ರಾವ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಇಂದು ಮಾರ್ಗದರ್ಶಿ ಚಿಟ್ ಫಂಡ್ನ ಮತ್ತೊಂದು ಶಾಖೆಯನ್ನು ಅನಾವರಣಗೊಳಿಸಲಾಗುತ್ತಿದೆ. ತೆಲಂಗಾಣದ ವನಪರ್ಥಿಯಲ್ಲಿ ಮಾರ್ಗದರ್ಶಿ ಚಿಟ್ ಫಂಡ್ನ 116ನೇ ಘಟಕವನ್ನು ಉದ್ಘಾಟಿಸಲಾಗುತ್ತಿದೆ. ಮಾರ್ಗದರ್ಶಿ ಚಿಟ್ ಫಂಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಶೈಲಜಾ ಕಿರಣ್ ಅವರು ರಾಮೋಜಿ ಫಿಲ್ಮ್ ಸಿಟಿಯಿಂದ ವರ್ಚುವಲ್ ಮೂಲಕ ವನಪರ್ಥಿಯ ನೂತನ ಶಾಖೆಗೆ ಚಾಲನೆ ನೀಡಲಿದ್ದಾರೆ. ರಾಮೋಜಿ ಗ್ರೂಪ್ನ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿರುವ ಮಾರ್ಗದರ್ಶಿಯು 1962 ರಿಂದ ಹಣಕಾಸು ಸೇವಾ ಕ್ಷೇತ್ರದಲ್ಲಿ ತನ್ನದೇ ಆದ ವಿಶ್ವಾಸಾರ್ಹತೆ, ನಂಬಿಕೆ ಮತ್ತು ಪಾರದರ್ಶಕತೆಗೆ ಹೆಸರುವಾಸಿಯಾಗಿದೆ. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯದಲ್ಲಿ ಸಂಸ್ಥೆಯು ಬ್ರ್ಯಾಂಚ್ಗಳನ್ನು ಹೊಂದಿದ್ದು, ಸಾವಿರಾರು ಗ್ರಾಹಕರನ್ನು ಆರ್ಥಿಕವಾಗಿ ಸಬಲೀಕರಣ ಮಾಡಿದೆ. ಕಳೆದ ಆರು ದಶಕಗಳಲ್ಲಿ ಮಾರ್ಗದರ್ಶಿ ಚಿಟ್ ಫಂಡ್ ಸಾಕಷ್ಟು ಅಭಿವೃದ್ಧಿ ಕಂಡಿದೆ. ಈಗಾಗಲೇ 115 ಬ್ರಾಂಚ್ಗಳಲ್ಲಿ ಲಕ್ಷಾಂತರ ಚಂದಾದಾರರಿದ್ದಾರೆ. ಸಂಸ್ಥೆಯಲ್ಲಿ 4,100 ಮಂದಿ ಉದ್ಯೋಗಿಗಳಿದ್ದು, 18 ಸಾವಿರ ಏಜೆಂಟರುಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಮೂಲಕ ಸಂಸ್ಥೆ ಅನೇಕರಿಗೆ ಜೀವನೋಪಾಯದ ಮೂಲಾಧಾರವಾಗಿದೆ.
Last Updated : Nov 16, 2024, 12:33 PM IST