ದೆಹಲಿಯ ಶಹಬಾದ್ ಡೈರಿ ಪ್ರದೇಶದ ಕೊಳೆಗೇರಿಯಲ್ಲಿ ಭಾರಿ ಅಗ್ನಿ ಅವಘಡ: ವಿಡಿಯೋ - ಕೊಳೆಗೇರಿಯಲ್ಲಿ ಭಾರಿ ಅಗ್ನಿ ಅವಘಡ
Published : Feb 19, 2024, 1:34 PM IST
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಅಗ್ನಿ ಅವಘಡದ ಘಟನೆ ಸಂಭವಿಸಿದೆ. ಶಹಬಾದ್ ಡೈರಿ ಪ್ರದೇಶದ ಕೊಳೆಗೇರಿಯಲ್ಲಿ 150ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಕೊಳೆಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಜನರು ಭಯಗೊಂಡು ಓಡುತ್ತಿರುವುದು ಕಂಡು ಬಂದಿದೆ. ವಿಷಯ ತಿಳಿದು 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ನಿನ್ನೆ ರಾತ್ರಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಶಹಬಾದ್ ಡೈರಿ ಪ್ರದೇಶದ ಕೊಳೆಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕರೆ ಬಂದಿದೆ. ನಿನ್ನೆ (ಭಾನುವಾರ) ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ 15 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಅಪಘಾತದಲ್ಲಿ ಗಾಯಗೊಂಡಿರುವ ಅಥವಾ ಸಾವನ್ನಪ್ಪಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. 150ಕ್ಕೂ ಹೆಚ್ಚು ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಸದ್ಯ ಬೆಂಕಿ ಹತೋಟಿಗೆ ಬಂದಿದೆ.
ಈ ಘಟನೆಯಿಂದ ನೂರಾರು ಕುಟುಂಬಗಳು ನಿರಾಶ್ರಿತವಾಗಿವೆ. ಈ ಬೆಂಕಿ ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಕಾರಣ ತಿಳಿದು ಬಂದಿಲ್ಲ. ತನಿಖೆಯ ನಂತರವಷ್ಟೇ ಸ್ಪಷ್ಟವಾಗಲಿದೆ. ಇತ್ತೀಚೆಗಷ್ಟೇ ದೆಹಲಿಯ ಅಲಿಪುರದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ 11 ಜನರ ಪ್ರಾಣ ಕಳೆದುಕೊಂಡಿದ್ದರು.
ಇದನ್ನೂ ಓದಿ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಕ್ರಿಕೆಟಿಗ ಕೆ.ಎಲ್. ರಾಹುಲ್