ಕರ್ನಾಟಕ

karnataka

ETV Bharat / videos

LIVE: ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ಕಾರ್ಯಕ್ರಮ - MP Sumalatha - MP SUMALATHA

By ETV Bharat Karnataka Team

Published : Apr 5, 2024, 12:16 PM IST

Updated : Apr 5, 2024, 1:02 PM IST

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು​ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುಮಲತಾ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ.ಇತ್ತೀಚೆಗೆ ಮಂಡ್ಯದಲ್ಲಿ ಕ್ಷೇತ್ರದ ಅಭಿಮಾನಿಗಳು ಮತ್ತು ಬೆಂಬಲಿಗರ ಸಭೆ ನಡೆಸಿದ್ದ ಸುಮಲತಾ, ಬಳಿಕ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿಯೂ ಸ್ಪರ್ಧಿಸುವುದಿಲ್ಲ, ಮಂಡ್ಯ ಬಿಟ್ಟು ಬೇರೆ ಎಲ್ಲಿಯೂ ಚುನಾವಣೆಗೆ ನಿಲ್ಲುವುದಿಲ್ಲ ಎಂದು ನಿರ್ಧಾರ ತಿಳಿಸಿದ್ದರು.ಅಲ್ಲದೆ, ಬಿಜೆಪಿ ಸೇರುತ್ತಿರುವ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದ ಅವರು, ''ಮಂಡ್ಯದ ಅಭಿವೃದ್ಧಿಯನ್ನೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗುತ್ತಿರುವೆ'' ಎಂದು ಬರೆದುಕೊಂಡಿದ್ದರು.ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದಾರೆ.  
Last Updated : Apr 5, 2024, 1:02 PM IST

ABOUT THE AUTHOR

...view details