LIVE; ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ನೇತೃತ್ವದಲ್ಲಿ ಜಂಟಿ ಸುದ್ದಿಗೋಷ್ಠಿ - MUDA Case LIVE
Published : Sep 24, 2024, 3:10 PM IST
|Updated : Sep 24, 2024, 5:57 PM IST
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಇಂದು ಆದೇಶ ನೀಡಿದೆ. ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಪ್ರತಿಪಕ್ಷದ ನಾಯಕರು ನೈತಿಕ ಹೊಣೆ ಹೊತ್ತು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿಬೇಕು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದಿದ್ದಾರೆ. ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳೊಂದಿಗೆ ಗೃಹ ಕಚೇರಿ ಕೃಷ್ಣದಲ್ಲಿ ಜಂಟಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಸಚಿವ ಸಂಪುಟದ ಎಲ್ಲ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.
Last Updated : Sep 24, 2024, 5:57 PM IST