ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್.. ಜಿಗಣೆಹಳ್ಳಿ ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ - ಕಾರ್ಣಿಕ ನುಡಿ
Published : Feb 26, 2024, 5:55 PM IST
ಚಿಕ್ಕಮಗಳೂರು : ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರ ಲಿಂಗೇಶ್ವರ ಸ್ವಾಮಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದರು. ಈ ವರ್ಷ ಮಳೆ ಬೆಳೆ ಸಮೃದ್ಧವಾಗಿ ಆಗುತ್ತದೆ. ಮತ್ತೆ ಕಮಲ ಅರಳುತ್ತದೆ ಎಂಬ ಕಾರ್ಣಿಕ ನುಡಿ ಕೇಳಿ ಬಂದಿದೆ. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್ ಎಂದು ಮೈಲಾರ ಲಿಂಗೇಶ್ವರ ಸ್ವಾಮಿ ಭವಿಷ್ಯ ವಾಣಿ ನುಡಿದಿದ್ದಾರೆ. ಈಗಾಗಲೇ ದೇಶಾದ್ಯಂತ ಲೋಕಸಭೆ ಚುನಾವಣಾ ಕಾವು ನಿಧಾನವಾಗಿ ಏರುತ್ತಿದೆ. ಪ್ರತಿಯೊಂದು ಪಕ್ಷಗಳ ನಾಯಕರು ಈ ಬಾರಿ ನಾವೇ ಗೆಲ್ಲುತ್ತೇವೆ, ನಮ್ಮದೇ ಅಧಿಕಾರ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಪ್ರತಿಯೊಬ್ಬರು ತಮ್ಮದೇ ಆದ ಕಸರತ್ತು ನಡೆಸಿ ಜನರು ಬಳಿ ಹೋಗುತ್ತಿದ್ದಾರೆ. ಆದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮೈಲಾರಲಿಂಗೇಶ್ವರ್ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ ಎಂದು ಜಿಲ್ಲೆಯ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ : ಹಾವೇರಿ: ಬೀಳ್ಕೊಡುಗೆ ವೇಳೆ ತಂದೆ-ತಾಯಿ ಪಾದಪೂಜೆ ನೆರವೇರಿಸಿ ಭಕ್ತಿ ವಾತ್ಸಲ್ಯ ಮೆರೆದ ವಿದ್ಯಾರ್ಥಿಗಳು