ಕರ್ನಾಟಕ

karnataka

ETV Bharat / videos

ಮಹಾಶಿವರಾತ್ರಿ: ನಂಜುಂಡೇಶ್ವರ ದೇವಸ್ಥಾನದ‌ಲ್ಲಿ ಸಾವಿರಾರು ಭಕ್ತರಿಂದ ಜಾಗರಣೆ - Shivaratri 2024

By ETV Bharat Karnataka Team

Published : Mar 9, 2024, 9:38 AM IST

ಮೈಸೂರು: ಮಹಾಶಿವರಾತ್ರಿ ಹಿನ್ನೆಲೆ ಶುಕ್ರವಾರದಂದು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ‌ ಮುಂದೆ ಭಕ್ತರಿಂದ ಜಾಗರಣೆ ನಡೆದರೆ, ಸುತ್ತೂರು ಶ್ರೀ ಕ್ಷೇತ್ರದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶಿವಸ್ಮರಣೆ ಮಾಡಿದರು.

ಮಹಾಶಿವರಾತ್ರಿ ಅಂಗವಾಗಿ ದಕ್ಷಿಣಕಾಶಿ ನಂಜನಗೂಡು ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಶುಕ್ರವಾರ ಸಂಜೆ 7:30ಕ್ಕೆ ಮಾಜಿ ಸಚಿವ ಹಾಗೂ ಶಾಸಕ ಹೆಚ್.ಡಿ ರೇವಣ್ಣ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ನಾರಾಯಣ ಸ್ವಾಮಿ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು. ಪ್ರತೀ ವರ್ಷ ಮಹಾಶಿವರಾತ್ರಿ ಹಬ್ಬದಂದು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದು ವಾಡಿಕೆಯಾಗಿದ್ದು, ಇಂದು ಕೂಡ ದೇವಾಲಯಕ್ಕೆ ಆಗಮಿಸಿದ್ದೇನೆ ಎಂದು ರೇವಣ್ಣ ತಿಳಿಸಿದರು.

ಮಹಾಶಿವರಾತ್ರಿ ಪ್ರಯುಕ್ತ ಜಾಗರಣೆ ಮಾಡುವ ಭಕ್ತರಿಗಾಗಿ ನಂಜುಂಡೇಶ್ವರ ಸ್ವಾಮಿ ದೇವಾಲಯದ ವತಿಯಿಂದ ಇಡೀ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಇದಕ್ಕಾಗಿ ದೇವಾಲಯದ ಮುಂಭಾಗದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿತ್ತು. ದೇವಾಲಯಗಳ ಬಳಿ 3 ಡಿಸಿಪಿ, 12 ಎಸಿಪಿ, 33 ಇನ್‌ಸ್ಪೆಕ್ಟರ್, 58 ಪಿಎಸ್‌ಐ, 114 ಎಎಸ್‌ಐ, 770 ಕಾನ್‌ಸ್ಪೇಬಲ್, 103 ಮಹಿಳಾ ಸಿಬ್ಬಂದಿ ಒಳಗೊಂಡಂತೆ ಕೆಎಸ್‌ಆರ್‌ಪಿ, ಸಿಎಆರ್ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಮುರುಡೇಶ್ವರದಲ್ಲಿ ಶಿವರಾತ್ರಿ ಸಂಭ್ರಮ: ಶಿವ ದರ್ಶನ ಪಡೆದ ಸಾವಿರಾರು ಭಕ್ತರು

ABOUT THE AUTHOR

...view details