ಸಂಸತ್ ಅಧಿವೇಶನ: ರಾಷ್ಟ್ರಪತಿಗಳ ಭಾಷಣದ ಮೇಲೆ ಪ್ರಧಾನಿ ಉತ್ತರ: ನೇರಪ್ರಸಾರ - Lok Sabha Session - LOK SABHA SESSION
Published : Jul 2, 2024, 11:03 AM IST
|Updated : Jul 2, 2024, 6:39 PM IST
ನವದೆಹಲಿ: ಸಂಸತ್ತಿನ ಅಧಿವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ಅವರು ಧನ್ಯವಾದ ಸಮರ್ಪಣೆ ಮಾಡುತ್ತಿದ್ದಾರೆ. ಇದೇ ವೇಳೆ ಇನ್ನಿತರ ವಿಷಯಗಳ ಬಗ್ಗೆ ಹಾಗೂ ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲಿದ್ದಾರೆ. ನಿನ್ನೆ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾಷಣ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. "ಹಿಂದೂಗಳೆಂದು ಹೇಳಿಕೊಂಡು ದ್ವೇಷ ಮತ್ತು ಹಿಂಸಾಚಾರದಲ್ಲಿ ತೊಡಗಿದ್ದಾರೆ" ಎಂದು ಗಂಭೀರ ಆರೋಪ ಮಾಡಿದ್ದರು. ಇದು ಆಡಳಿತಾರೂಢ ಬಿಜೆಪಿ ನಾಯಕರನ್ನು ಕೆರಳಿಸಿತು. ನಂತರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ರಾಹುಲ್, "ನಾನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉದ್ದೇಶಿಸಿ ಹೇಳಿದ್ದೇನೆ. ಹಿಂದೂ ಸಮಾಜ ಎಂದರೆ ಈ ಮೂವರು ಮಾತ್ರವಲ್ಲ" ಎಂದಿರುವುದಾಗಿ ತಿಳಿಸಿದರು."ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ, ಸದನದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇಡೀ ಹಿಂದೂ ಸಮುದಾಯವನ್ನೇ ಹಿಂಸಾಚಾರಿಗಳು ಎಂದು ಹೇಳಿರುವುದು ಸರಿಯಲ್ಲ" ಎಂದು ಪ್ರಧಾನಿ ಮೋದಿ ಸೇರಿದಂತೆ ಇತರೆ ನಾಯಕರು ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದರು.ಇನ್ನು, ಸದನದಲ್ಲಿ ಗೃಹ ಸಚಿವ ಅಮಿತ್ ಶಾ, ಹೊಸ ಅಪರಾಧ ಕಾನೂನುಗಳ ಕುರಿತು ಮಾತನಾಡಿದರು. "ಈ ಕಾನೂನುಗಳಲ್ಲಿ ಶಿಕ್ಷೆಗಿಂತ ಹೆಚ್ಚಾಗಿ ನ್ಯಾಯಕ್ಕೆ ಆದ್ಯತೆ ನೀಡಲಾಗಿದೆ" ಎಂದು ತಿಳಿಸಿದರು. ಇಂದು ಸಂಜೆ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಪ್ರಧಾನಿ ನರೇಂದ್ರ ಮೋದಿ ಮಾತನಾಡುವ ಸಾಧ್ಯತೆ ಇದೆ.
Last Updated : Jul 2, 2024, 6:39 PM IST