ಕರ್ನಾಟಕ

karnataka

ETV Bharat / videos

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ: ನೇರ ಪ್ರಸಾರ - PM Modi Campaigns

By ETV Bharat Karnataka Team

Published : Mar 18, 2024, 3:22 PM IST

Updated : Mar 18, 2024, 4:19 PM IST

ಶಿವಮೊಗ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿ, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಶನಿವಾರವಷ್ಟೇ ಪ್ರಧಾನಿ ಮೋದಿ ಅವರು ಕಲಬುರಗಿಯಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರದ ಕಹಳೆ ಮೊಳಗಿಸಿದ್ದರು.  ಸಮಾವೇಶದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಗೂ ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಭಾಗಿಯಾಗಿದ್ದಾರೆ. ಜೊತೆಗೆ ಈ ಕ್ಷೇತ್ರಗಳಿಂದ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿ ಆಗಮಿಸಿದರು. ಬಳಿಕ ಸುಮಾರು 14 ಕಿಲೋ ಮೀಟರ್​ ದೂರ ಕಾರಿನಲ್ಲಿ ಪ್ರಯಾಣಿಸಿ ವೇದಿಕೆ ತಲುಪಿದರು. ಇನ್ನು ತಮ್ಮ ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಭಾ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ಬಂಡಾಯವೆದ್ದು, ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ ಇಂದಿನ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ. 
Last Updated : Mar 18, 2024, 4:19 PM IST

ABOUT THE AUTHOR

...view details