ರಾಷ್ಟ್ರಪತಿ ಭವನದಲ್ಲಿ 'ಅಟ್ ಹೋಮ್' ಭೋಜನಕೂಟ.. ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾಗಿ - At Home reception
Published : Jan 26, 2024, 9:20 PM IST
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಗಣರಾಜ್ಯೋತ್ಸವದಂದು 'ಅಟ್ ಹೋಮ್' ಭೋಜನಕೂಟವನ್ನು ಆಯೋಜಿಸಿದ್ದಾರೆ. ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್, ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷ ಜಗದೀಪ್ ಧಂಖರ್ ಮತ್ತು ಅವರ ಪತ್ನಿ ಸುದೇಶ್ ಧಂಖರ್ ಉಪಸ್ಥಿತರಿದ್ದರು. ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಹಲವಾರು ನಾಯಕರು ಮತ್ತು ರಕ್ಷಣಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ 75ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಫ್ರೆಂಚ್ ತುಕಡಿಗಳು ಭಾರತೀಯ ಪಡೆಗಳೊಂದಿಗೆ ಕರ್ತವ್ಯ ಪಥದಲ್ಲಿ ಸಾಗಿದವು.
ಇದನ್ನೂ ಓದಿ: ದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು