ಬೆಳಗಾವಿ: ಸುಟ್ಟು ಕರಕಲಾದ ಖಾಸಗಿ ಬಸ್, 28 ಪ್ರಯಾಣಿಕರು ಪಾರು - ಸುಟ್ಟು ಕರಕಲಾದ ಬಸ್
Published : Mar 1, 2024, 3:53 PM IST
ಚಿಕ್ಕೋಡಿ(ಬೆಳಗಾವಿ): ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹುಕ್ಕೇರಿ ಹರಾಗಾಪೂರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಬಸ್ ಇದಾಗಿದೆ. 28 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಚಾಲಕನ ಮುಂಜಾಗ್ರತೆಯಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಢಾಕಾದ ರೆಸ್ಟೋರೆಂಟ್‌ನಲ್ಲಿ ಭಾರಿ ಅಗ್ನಿ ಅವಘಡ: 43 ಜನರು ಸಾವು
ಭಾರೀ ಅಗ್ನಿ ಅವಘಡ, 43 ಮಂದಿ ಸಾವು: ನೆರೆ ರಾಷ್ಟ್ರ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಏಳು ಅಂತಸ್ತಿನ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 43 ಜನರು ಸಾವನ್ನಪ್ಪಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗ್ತಿದೆ. ಅಗ್ನಿಶಾಮಕ ಸಿಬ್ಬಂದಿ 75 ಜನರನ್ನು ರಕ್ಷಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಯಿಂದ ಗೊತ್ತಾಗಿದೆ.