ಕರ್ನಾಟಕ

karnataka

ETV Bharat / videos

'ಕುರಿಗಾಹಿಗಳಿಗೆ ರಕ್ಷಣೆ ಕೊಡಿ': ಹುಬ್ಬಳ್ಳಿಯಲ್ಲಿ ಸಂಚಾರಿ ಕುರಿಗಾಹಿಗಳಿಂದ ಪ್ರತಿಭಟನೆ

By ETV Bharat Karnataka Team

Published : Jan 24, 2024, 8:25 PM IST

Updated : Jan 24, 2024, 10:03 PM IST

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ಸಂಚಾರಿ ಕುರಿಗಾಹಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟು ಧಮ್ಕಿ ಹಾಕಿದ ಆರೋಪ ಪ್ರಕರಣ ಸಂಬಂಧ ಕುರಬ ಸಮಾಜದ ಸಂಘಟನೆಗಳ ಒಕ್ಕೂಟದಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನೂರಾರು ಕುರಿಗಳೊಂದಿಗೆ ಹುಬ್ಬಳ್ಳಿಯ ಚನ್ನಮ್ಮ ವೃತ್ತಕ್ಕೆ ಆಗಮಿಸಿದ ಸಂಚಾರಿ ಕುರಿಗಾಹಿಗಳು ಈ ಪ್ರಕರಣದಲ್ಲಿ ಕೂಡಲೇ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಕಲಘಟಗಿಯಲ್ಲಿ ಸಂಚಾರಿ ಕುರಿಗಾಹಿಯ ಮೇಲೆ ನಡೆದ ದಬ್ಬಾಳಿಕೆ ಹಾಗೂ ಲಂಚಕ್ಕೆ ಬೇಡಿಕೆ ಇಟ್ಟ ಅರಣ್ಯಾಧಿಕಾರಿಗಳ ಅಮಾನವೀಯ ಕೃತ್ಯದ ಬಗ್ಗೆ ಪ್ರತಿಭಟನಾನಿರತರು ಖಂಡಿಸಿದರು. ಇದೇ ವೇಳೆ, ಸರ್ಕಾರವು ಕುರಿಗಾಹಿಗಳಿಗೆ ಸೂಕ್ತ ಕಾನೂನಿನ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಕುರಿಗಳೊಂದಿಗೆ ಹುಬ್ಬಳ್ಳಿ ಚನ್ನಮ್ಮ ವೃತ್ತದಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ತಹಶೀಲ್ದಾರ್​ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. 

ಈ ವೇಳೆ, ಕುರುಬ ಸಮಾಜ ಮುಖಂಡ ಸಿದ್ದು ತೇಜಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಸಂಚಾರಿ ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಬ್ಬಾಳಿಕೆ‌ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕುರುಬರ ಹಿತರಕ್ಷಣೆಗೆ ಕಾನೂನು ತರಬೇಕು ಎಂದು ಮನವಿ ಮಾಡಿದರು. 

ಇದನ್ನೂ ಓದಿ: ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲೇ ಇಬ್ಬರ ನಡುವೆ ಹೊಡೆದಾಟ

Last Updated : Jan 24, 2024, 10:03 PM IST

ABOUT THE AUTHOR

...view details