ದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ನೇರ ಪ್ರಸಾರ - REPUBLIC DAY 2025
Published : Jan 26, 2025, 10:05 AM IST
|Updated : Jan 26, 2025, 12:32 PM IST
ನವದೆಹಲಿ: ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಇಂದು ದೆಹಲಿಯ ಕರ್ತವ್ಯ ಪಥ ಗಣರಾಜೋತ್ಸವ ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ. ಬೆಳಗ್ಗೆ 9.30ಕ್ಕೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸುವುದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವಕ್ಕೆ ಚಾಲನೆ ದೊರೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭಾಗವಹಿಸಲಿದ್ದಾರೆ. ಜೊತೆಗೆ ವಿವಿಧ ಕ್ಷೇತ್ರಗಳ ಸುಮಾರು 10 ಸಾವಿರ ವಿಶೇಷ ಅತಿಥಿಗಳನ್ನು ಪರೇಡ್ ವೀಕ್ಷಣೆಗೆ ಆಹ್ವಾನಿಸಲಾಗಿದೆ. ವಿಶೇಷವೆಂದ್ರೆ ಕರ್ತವ್ಯ ಪಥದಲ್ಲಿ ನಡೆಯುವ ಸಾಂಪ್ರದಾಯಿಕ ಪರೇಡ್‌ನಲ್ಲಿ ಇಂಡೋನೇಷ್ಯಾದ ಸೇನಾ ತುಕಡಿಗಳೂ ಪಾಲ್ಗೊಳ್ಳಲಿವೆ. ಪರೇಡ್‌ನಲ್ಲಿ ವಿವಿಧ ರಾಜ್ಯಗಳು, ಕೇಂದ್ರಾಡಳಿತಗಳು ಪ್ರದೇಶಗಳ ಮತ್ತು ಸಚಿವಾಲಯಗಳ 31 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ. ಜೊತೆಗೆ 5 ಸಾವಿರ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.ಗಣರಾಜ್ಯೋತ್ಸವ ಹಿನ್ನೆಲೆ ರಾಜಧಾನಿಯಾದ್ಯಂತ ಅರೆಸೇನಾ ಪಡೆ ಸಿಬ್ಬಂದಿ ಮತ್ತು 70 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಗಣರಾಜ್ಯೋತ್ಸವ 2025: ದೆಹಲಿಯ ಕರ್ತವ್ಯ ಪಥದಲ್ಲಿ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ಶ್ರೀಮಂತಿಕೆ ಪ್ರದರ್ಶನ
Last Updated : Jan 26, 2025, 12:32 PM IST