ಕರ್ನಾಟಕ

karnataka

ETV Bharat / videos

ಸಿದ್ಧಾರೂಢರ ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ: ಎಲ್ಲೆಡೆಯೂ ಓಂಕಾರ ನಾದ - Siddharudha Mutt Teppotsava

By ETV Bharat Karnataka Team

Published : Aug 20, 2024, 10:41 PM IST

ಹುಬ್ಬಳ್ಳಿ: ಉತ್ತರ ಕರ್ನಾಟಕ ಆರಾಧ್ಯ ದೈವ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ಇಂದು ತೆಪ್ಪೋತ್ಸವ ಅದ್ಧೂರಿಯಾಗಿ ಜರುಗಿತು. ಎಲ್ಲೆಡೆಯೂ ಓಂಕಾರ ನಾದದಿಂದ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಸದ್ಗುರು ಸಿದ್ಧಾರೂಢರ 95ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತೆಪ್ಪೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುವ ಮೂಲಕ ಸಿದ್ದಾರೂಢ ಶ್ರೀಗಳ ಕೃಪೆಗೆ ಪಾತ್ರರಾದರು. ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಟ್ರಸ್ಟ್ ಕಮಿಟಿ ಆಶ್ರಯದಲ್ಲಿ ನಡೆದ ಸಂಭ್ರಮಕ್ಕೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಸಾಕ್ಷಿಯಾದರು. 

ಕಣ್ಣು ಹಾಯಿಸಿದ ಕಡೆಯಲ್ಲೆಲ್ಲೂ ಭಕ್ತಸಾಗರವೇ ನೆರೆದಿತ್ತು. ಓಂ ನಮ: ಶಿವಾಯ ನಾಮಸ್ಮರಣೆಗಳು ಅನುರಣಿಸಿದವು. ಕಲ್ಯಾಣಿಯಲ್ಲಿ ತೇರು ಐದು ಸುತ್ತ ಪ್ರದಕ್ಷಿಣೆ ಹಾಕಿತು. ಸುತ್ತ ಕಿಕ್ಕಿರಿದು ಸೇರಿದ ಭಕ್ತರು ಉತ್ತತ್ತಿ, ಬಾಳೆಹಣ್ಣು, ಲಿಂಬೆಹಣ್ಣು ಎಸೆದರು. ರಾಜ್ಯ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ, ಆಂಧ್ರ ಪ್ರದೇಶದಿಂದ ಆಗಮಿಸಿದ ಭಕ್ತರು ಜಲರಥೋತ್ಸವದಲ್ಲಿ ಪಾಲ್ಗೊಂಡರು ಮೂಲಕ ಸಿದ್ದಾರೂಢರ ಆಶೀರ್ವಾದ ಪಡೆದುಕೊಂಡರು. 

ಇದನ್ನೂ ಓದಿ: ಹಾವೇರಿ: ತುಂಬಿದ ನದಿಯಲ್ಲಿ ಸಿದ್ಧಾರೂಢ ಮತ್ತು ಮಲ್ಲಿಕಾರ್ಜುನಸ್ವಾಮಿಗೆ ತೆಪ್ಪೋತ್ಸವ - teppotsava

ABOUT THE AUTHOR

...view details