LIVE: ರಾಮೋಜಿ ರಾವ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ - Tribute to Ramoji Rao
Published : Jun 19, 2024, 12:15 PM IST
|Updated : Jun 19, 2024, 1:05 PM IST
ಬೆಂಗಳೂರು: ಇತ್ತೀಚೆಗೆ ನಿಧನರಾದ ಮಾಧ್ಯಮ ಲೋಕದ ದಿಗ್ಗಜ, ಪದ್ಮ ವಿಭೂಷಣ ರಾಮೋಜಿ ರಾವ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯುತ್ತಿದೆ. ನಗರದ ಕೆ.ಜಿ ರೋಡ್ನ ಕಂದಾಯ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈನಾಡು ಸಮೂಹ ಸಂಸ್ಥೆಗಳ ಸಂಸ್ಥಾಪಕರಾಗಿದ್ದ ರಾಮೋಜಿ ರಾವ್ ಅವರು ಸಾವಿರಾರು ಜನರಿಗೆ ಉದ್ಯೋಗದಾತರಾಗಿದ್ದರು. ಈನಾಡು ದಿನಪತ್ರಿಕೆಯ ಜೊತೆಗೆ ಈಟಿವಿ ಸುದ್ದಿ ವಾಹಿನಿಯನ್ನೂ ಆರಂಭಿಸಿ ಯಶಸ್ಸು ಸಾಧಿಸಿದ್ದರು. ಅಲ್ಲದೆ, ಹೈದರಾಬಾದ್ನಲ್ಲಿ ಜಗತ್ಪ್ರಸಿದ್ಧ ರಾಮೋಜಿ ಫಿಲಂ ಸಿಟಿ ನಿರ್ಮಿಸಿದ ಹೆಗ್ಗಳಿಕೆ ಅವರದ್ದಾಗಿದೆ. ರಾಮೋಜಿ ಅವರು ಜೂನ್ 8ರಂದು ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ದೇಶಾದ್ಯಂತ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಇತ್ತೀಚೆಗೆ ಇಹಲೋಕ ತ್ಯಜಿಸಿದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ಅವರಿಗೂ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಅವರು ಜೂನ್ 15ರಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ ಹಿಂದು ಪತ್ರಿಕೆಯಲ್ಲಿ ಸುಮಾರು 47 ವರ್ಷ ಸೇವೆ ಸಲ್ಲಿಸಿದ್ದ ಮತ್ತಿಹಳ್ಳಿ ಮದನ ಮೋಹನ ಅವರು ಉತ್ತರ ಕರ್ನಾಟಕದ ಮಾಹಿತಿ ಕಣಜ ಎಂದೇ ಹೆಸರುವಾಸಿಯಾಗಿದ್ದರು. ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ 1976ರಲ್ಲಿ ಸ್ಥಾಪನೆಗೊಂಡ ಸಮಯದಲ್ಲಿ ಸಂಘದ ಪ್ರಪ್ರಥಮ ಖಜಾಂಚಿಗಳಾಗಿ ಕಾರ್ಯ ನಿರ್ವಹಿಸಿದ್ದರು.
Last Updated : Jun 19, 2024, 1:05 PM IST