ಕರ್ನಾಟಕ

karnataka

ETV Bharat / videos

ತುಂಗಭದ್ರಾ ಡ್ಯಾಂ ಕ್ರಸ್ಟ್​ ಗೇಟ್​ ಪ್ರಕರಣ ನ್ಯಾಯಾಂಗ ತನಿಖೆಗೆ ವಹಿಸಿ, ಡಿಕೆಶಿ ರಾಜೀನಾಮೆ ನೀಡಲಿ: ರೈತ ಸಂಘಟನೆ - Tungabhadra Dam Gate - TUNGABHADRA DAM GATE

By ETV Bharat Karnataka Team

Published : Aug 13, 2024, 5:46 PM IST

ರಾಯಚೂರು: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್​ ಗೇಟ್ ಕೊಚ್ಚಿ ಹೋದ ಪ್ರಕರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆಯ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ್ ಒತ್ತಾಯಿಸಿದ್ದಾರೆ.  

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜೀವನಾಡಿ ತುಂಗಭದ್ರಾ ಜಲಾಶಯ ಸೇರಿದಂತೆ ಎಲ್ಲಾ ಜಲಾಶಯಗಳಲ್ಲಿ ಸಮಸ್ಯೆಗಳಿವೆ. ಇದರ ಕುರಿತು ಸಭೆ ಕರೆಯುವಂತೆ ಸಂಘಟನೆಯಿಂದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ್‌ ಅವರಿಗೆ ಒತ್ತಾಯಿಸಿ ಮನವಿ ಪತ್ರವನ್ನು ಕಳೆದ ವರ್ಷ ನೀಡಲಾಗಿತ್ತು. ಆದರೆ ಸಚಿವರು ಮಾತ್ರ ಕ್ಯಾರೆನ್ನದೆ ಮನವಿಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಸರ್ಕಾರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ನೀಡಬೇಕು. ಇದರ ಜೊತೆಗೆ, ಘಟನೆಗೆ ಕಾರಣರಾದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​ ಅವರ ರಾಜೀನಾಮೆಯನ್ನು ಸಿಎಂ ಪಡೆಯಬೇಕು ಎಂದು ಆಗ್ರಹಿಸಿದರು.

ತುಂಗಭದ್ರಾ ಜಲಾಶಯದಿಂದ ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಎರಡು ಬೆಳೆಗಳಿಗೆ ನೀರು ದೊರೆಯುತ್ತಿತ್ತು. ಈ ಘಟನೆಯಿಂದ ಒಂದು ಬೆಳೆಗೂ ನೀರು ಸಿಗುವುದು ಕಷ್ಟ. ಇದರಿಂದ ಅಂದಾಜು 10 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದರು.

ಇದನ್ನೂ ಓದಿ: ತುಂಗಭದ್ರಾ ವಿಚಾರದಲ್ಲಿ ನಾನು ರಾಜಕೀಯ ಮಾಡಲು ಬಯಸುವುದಿಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah

ABOUT THE AUTHOR

...view details