ಭುವನೇಶ್ವರ ನಿಲ್ದಾಣದ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು; ಮುಂದುವರೆದ ಪುನಃಸ್ಥಾಪನೆ ಕಾರ್ಯ - goods train derail
Published : Jul 26, 2024, 4:11 PM IST
ಭುವನೇಶ್ವರ (ಒಡಿಶಾ) : ಶುಕ್ರವಾರ ಬೆಳಗ್ಗೆ ಇಲ್ಲಿನ ಭುವನೇಶ್ವರ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು ಹಳಿತಪ್ಪಿದೆ ಎಂದು ವರದಿಯಾಗಿದೆ. ಈಸ್ಟ್ ಕೋಸ್ಟ್ ರೈಲ್ವೆ (ಇಸಿಒಆರ್) ಪ್ರಕಾರ, ಶುಕ್ರವಾರ ಬೆಳಗ್ಗೆ 8.40ಕ್ಕೆ ಭುವನೇಶ್ವರ ನಿಲ್ದಾಣದ ಬಳಿ ಗೂಡ್ಸ್ ರೈಲಿನ ಎರಡು ವ್ಯಾಗನ್‌ಗಳು ಹಳಿಯಿಂದ ಕೆಳಗಿಳಿದಿವೆ.
ರೈಲು ಹಳಿ ತಪ್ಪಿದ್ದರಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಯಾವುದೇ ಜೀವ ಅಥವಾ ಆಸ್ತಿಗೆ ಹಾನಿಯಾಗಿಲ್ಲ ಎಂದು ಇಸಿಒಆರ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತದಿಂದಾಗಿ ರೈಲು ಸಂಚಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.
ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ರೈಲು : ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಎಕ್ಸ್‌ಪ್ರೆಸ್ ರೈಲೊಂದು ಹಳಿತಪ್ಪಿ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದ ಘಟನೆ (ಜುಲೈ 18 2024) ರಂದು ನಡೆದಿತ್ತು. ಚಂಡೀಗಢದಿಂದ ಗೋರಖ್‌ಪುರ ಮೂಲಕ ಅಸ್ಸಾಂಗೆ ತೆರಳುತ್ತಿದ್ದ 15904 ಸಂಖ್ಯೆಯ ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ 10 ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿತ್ತು. ದುರಂತದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.
ಇದನ್ನೂ ಓದಿ : ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ದಿಬ್ರುಗಢ ಎಕ್ಸ್‌ಪ್ರೆಸ್ ರೈಲು: ಕನಿಷ್ಠ ನಾಲ್ವರು ಸಾವು, ಹಲವರಿಗೆ ಗಾಯ - Train accident