ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು, ಐವರಿಗೆ ಗಾಯ - Car Accident - CAR ACCIDENT
Published : Oct 6, 2024, 5:12 PM IST
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಕಿಯಾ ಶೋರೂಂ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿದ ಪರಿಣಾಮ ಅದರಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ವೇಳೆ ಸಂಭವಿಸಿದೆ. ಕಾರಿನಲ್ಲಿ ಮಹಿಳೆಯರು ಸೇರಿ ಐವರು ಪ್ರಯಾಣಿಸುತ್ತಿದ್ದರು. ಕಾರು ಮಣಿಪಾಲದಿಂದ ಪಡುಬಿದ್ರಿ ಕಡೆಗೆ ತೆರಳುತ್ತಿತ್ತು. ಈ ವೇಳೆ ಉದ್ಯಾವರ ಬಳಿ ಈ ಘಟನೆ ನಡೆದಿದೆ.
ಅಪಘಾತದ ಸಂದರ್ಭದಲ್ಲಿ ಅದೇ ರಸ್ತೆ ಮಾರ್ಗದಲ್ಲಿ ತೆರಳುತ್ತಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಅವರು ಅಪಘಾತದಲ್ಲಿ ಗಾಯಗೊಂಡವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕಾರದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕಾಪು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.