ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ರಿಂದ ಬಜೆಟ್ ಮಂಡನೆ: ನೇರಪ್ರಸಾರ - Union Budget 2024 - UNION BUDGET 2024
Published : Jul 23, 2024, 11:02 AM IST
|Updated : Jul 23, 2024, 12:32 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸತತ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಅನ್ನು ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಪ್ರಸ್ತುತಪಡಿಸುತ್ತಿರುವ ಸತತ 7ನೇ ಆಯವ್ಯಯ ಆಗಿದೆ. ಲೋಕಸಭೆ ಚುನಾವಣೆಗೂ ಮುನ್ನ ಫೆಬ್ರವರಿಯಲ್ಲಿ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದರು. ಇದೀಗ ಅವರೇ 2024-25ರ ಸಾಲಿನ ಪೂರ್ಣ ಬಜೆಟ್ ಮಂಡಿಸುತ್ತಿದ್ದಾರೆ. ಮೋದಿ 3.0 ಸರ್ಕಾರದ ಮೊದಲ ಬಜೆಟ್ ಆಗಿರುವ ಕಾರಣ ಜನರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಜೊತೆಗೆ, ಎನ್ಡಿಎ ಮಿತ್ರಪಕ್ಷಗಳ ಸಹಕಾರದೊಂದಿಗೆ ಸರ್ಕಾರ ರಚನೆ ಮಾಡಿರುವ ಮೋದಿ, ತಮ್ಮ ಮಿತ್ರರ ಬೇಡಿಕೆಗಳನ್ನು ಈಡೇರಿಸುವುದರೊಂದಿಗೆ 2047ರ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಬೇಕಿದೆ.ಬಜೆಟ್ಗೂ ಮೊದಲು ಸೋಮವಾರ ಮಂಡನೆಯಾದ ಆರ್ಥಿಕ ಸಮೀಕ್ಷೆಯಲ್ಲಿ ನವಭಾರತದ ಕನಸನ್ನು ವಿವರಿಸಲಾಗಿದೆ. ದೇಶದ ಈಗಿನ ಆರ್ಥಿಕ ಸ್ಥಿತಿಗತಿ ಹೇಗಿದೆ ಎಂಬುದನ್ನು ತಿಳಿಸಲಾಗಿದೆ. 2024-25ರಲ್ಲಿ ಜಿಡಿಪಿ ಬೆಳವಣಿಗೆ ದರವನ್ನು ಶೇಕಡಾ 6.5ರಿಂದ 7ಕ್ಕೆ ಅಂದಾಜಿಸಲಾಗಿದೆ.ಸೂಕ್ತ ನೀತಿಗಳು ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಬೆಲೆ ಸ್ಥಿರತೆ ಕ್ರಮಗಳು ಚಿಲ್ಲರೆ ಹಣದುಬ್ಬರವನ್ನು ಶೇಕಡಾ 5.4ಕ್ಕಿಳಿಸಲು ಸಹಾಯ ಮಾಡಿದೆ ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ.
Last Updated : Jul 23, 2024, 12:32 PM IST