ಶಿವಮೊಗ್ಗ: ವಿಜಯೇಂದ್ರ, ರಾಘವೇಂದ್ರರ ಮನೆಗಳಿಗೆ ಯೂತ್ ಕಾಂಗ್ರೆಸ್ ಮುತ್ತಿಗೆ ಯತ್ನ - youth congress protest
Published : Feb 7, 2024, 4:58 PM IST
ಶಿವಮೊಗ್ಗ: ದೆಹಲಿಯ ಜಂತರ್ ಮಂತರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಸರ್ಕಾರ ಪ್ರತಿಭಟನೆ ನಡೆಸುತ್ತಿರುವ ಮಧ್ಯೆ ಶಿವಮೊಗ್ಗದಲ್ಲಿ ಇಂದು ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂಬಂಧ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಮೊದಲಿಗೆ ವಿನೋಬನಗರದ ಪೊಲೀಸ್ ಚೌಕಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಂತರ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಲು ತೆರಳಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ತಡೆದರು. ಬ್ಯಾರಿಕೇಡ್ ತೆರೆಯಲು ಮುಂದಾದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು.
ಮತ್ತೊಂದೆಡೆ, ಬಿ.ವೈ.ವಿಜಯೇಂದ್ರ ಮನೆಗೆ ಎನ್ಎಸ್ಯುಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಬೈಪಾಸ್ ರಸ್ತೆಯಲ್ಲಿ ಕೇಂದ್ರದ ವಿರುದ್ದ ಪ್ರತಿಭಟನೆ ನಡೆಸಿ, ನಂತರ ವಿಜಯೇಂದ್ರರ ಮನೆ ಮುತ್ತಿಗೆಗೆ ಮುಂದಾಗಿದ್ದಾರೆ. ಬ್ಯಾರಿಕೇಡ್ ತೆರವುಗೊಳಿಸಿ ಮುನ್ನುಗ್ಗಲು ಯತ್ನಿಸಿದ್ದು, ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.
ಇದನ್ನೂ ಓದಿ: 'ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ' : ಸಿಎಂ ಸಿದ್ದರಾಮಯ್ಯ