ಚೆನ್ನೈ (ತಮಿಳುನಾಡು): ಬಹುಜನ ಸಮಾಜ ಪಕ್ಷದ ತಮಿಳುನಾಡು ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಅವರನ್ನು 6 ಜನರ ಅಪರಿಚಿತ ತಂಡವು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿ ಹತ್ಯೆ ಮಾಡಿದೆ. ಪೆರಂಬೂರಿನ ಸದಾಯಪ್ಪನ್ ಸ್ಟ್ರೀಟ್ನಲ್ಲಿರುವ ಅವರ ಮನೆಯ ಸಮೀಪವೇ ಕೊಲೆ ಮಾಡಿದ ತಂಡ ಬಳಿಕ ಪರಾರಿಯಾಗಿದೆ.
ಬಹುಜನ ಸಮಾಜ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಹತ್ಯೆ
ಬಹುಜನ ಸಮಾಜ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಹತ್ಯೆ (ETV Bharat)
Published : Jul 5, 2024, 9:52 PM IST
ದುಷ್ಕರ್ಮಿಗಳ ದಾಳಿಯಿಂದ ಗಾಯಗೊಂಡು ನರಳುತ್ತಿದ್ದ ಆರ್ಮ್ಸ್ಟ್ರಾಂಗ್ ಅವರನ್ನು ಚಿಕಿತ್ಸೆಗಾಗಿ ಥೌಸಂಡ್ ಲೈಟ್ಸ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಈ ನಡುವೆ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸೆಂಬಿಯಂ ಪೊಲೀಸರು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಜೊತೆಗಿದ್ದ ಇಬ್ಬರ ಮೇಲೂ ಹರಿತವಾದ ಆಯುಧಗಳಿಂದ ದಾಳಿ ಮಾಡಿ ಗಾಯಗೊಳಿಸಲಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.