ಮೈಸೂರು:ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಕುಶಾಲ್ (11) ಸಾವನ್ನಪ್ಪಿದ್ದಾನೆ. ಈತನ ತಂದೆ ದೇಸಿಗೌಡ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದು, ತಾಯಿ ಲಕ್ಷ್ಮಿ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಿನ್ನೆ ಲಕ್ಷ್ಮಿ ಇಸ್ಕಾನ್ ದೇವಾಲಯಕ್ಕೆ ಹೋಗಿದ್ದರೆ, ತಂದೆಯೂ ಕೆಲಸ ನಿಮಿತ್ತ ಮನೆಯಿಂದ ತೆರಳಿದ್ದರು. ಮಧ್ಯಾಹ್ನ ಎರಡೂವರೆ ಗಂಟೆಯ ಸುಮಾರಿಗೆ ಶಾಲೆಯಿಂದ ಮನೆಗೆ ಬಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.