ಕರ್ನಾಟಕ

karnataka

ಬೆಂಗಳೂರು ನಗರದ‌ ಮಿಲಿಟರಿ ಶಾಲೆಗೆ ಹುಸಿ ಬಾಂಬ್ ಸಂದೇಶ

By ETV Bharat Karnataka Team

Published : Sep 18, 2024, 10:43 PM IST

fake-bomb-message-to-a-military-school-in-the-city
ಬೆಂಗಳೂರು ನಗರದ‌ ಮಿಲಿಟರಿ ಶಾಲೆಗೆ ಹುಸಿ ಬಾಂಬ್ ಸಂದೇಶ (ETV Bharat( ಸಾಂಕೇತಿಕ ಚಿತ್ರ))

ಬೆಂಗಳೂರು: ಅಶೋಕನಗರದ ಮಿಲಿಟರಿ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಸಂದೇಶ ಬಂದಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಶೋಕನಗರ ಮುಖ್ಯರಸ್ತೆೆಯಲ್ಲಿರುವ ಮಿಲಿಟರಿ ಶಾಲೆಯ ಇ-ಮೇಲ್ ವಿಳಾಸಕ್ಕೆೆ ಅಪರಿಚಿತ ವ್ಯಕ್ತಿಯೊಬ್ಬ ಬೆಳಗ್ಗೆೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಶಾಲಾ ಆವರಣದಲ್ಲಿ ಬಾಂಬ್ ಇರಿಸಲಾಗಿದ್ದು, ಬುಧವಾರ ಬೆಳಗ್ಗೆೆ 11 ಗಂಟೆಗೆ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಿದ್ದಾನೆ. ಬೆಳಗ್ಗೆೆ 9 ಗಂಟೆಗೆ ಶಾಲೆಗೆ ಬಂದ ಆಡಳಿತ ಮಂಡಳಿ ಸಿಬ್ಬಂದಿ ಶಾಲೆಯ ಇ-ಮೇಲ್ ವಿಳಾಸ ಪರಿಶೀಲಿಸುವಾಗ ಬಾಂಬ್ ಬೆದರಿಕೆ ಸಂದೇಶ ಗಮನಿಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಜತೆಗೆ ಶಾಲೆಗೆ ದೌಡಾಯಿಸಿದ ಪೊಲೀಸರು, ಶಾಲೆಯ ಕೊಠಡಿಗಳು ಹಾಗೂ ಆವರಣವನ್ನು ಪರಿಶೀಲಿಸಿದ್ದಾರೆ. ಆದರೆ, ಯಾವುದೇ ಬಾಂಬ್ ಅಥವಾ ಸ್ಫೋಟಕ ವಸ್ತುಗಳು ಪತ್ತೆೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಸಂದೇಶ ಎಂಬುದು ಗೊತ್ತಾಗಿದೆ. ಈ ಸಂಬಂಧ ಶಾಲೆಯ ಆಡಳಿತ ಮಂಡಳಿ ಅಧಿಕಾರಿಯೊಬ್ಬರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ABOUT THE AUTHOR

...view details