ಕರ್ನಾಟಕ

karnataka

ETV Bharat / snippets

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ, ಮಗುವಿಗೆ ಜನ್ಮ; ಅಪರಾಧಿಗೆ 20 ವರ್ಷ ಸಜೆ

minor girl rape case
ಸಂಗ್ರಹ ಚಿತ್ರ (ETV Bharat)

By ETV Bharat Karnataka Team

Published : Aug 30, 2024, 7:29 AM IST

ಮೈಸೂರು:ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ 20 ವರ್ಷಗಳ ಕಠಿಣ ಸಜೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಪ್ರೀತಿಸುವುದಾಗಿ ಹಾಗೂ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿದ್ದ. 2023ರ ಜ.18ರಂದು ತನ್ನ ಮನೆಯಲ್ಲಿ ಯಾರೂ ಇಲ್ಲದಿರುವಾಗ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದ. ಪರಿಣಾಮ ಅಪ್ರಾಪ್ತೆಯು ಗರ್ಭಿಣಿಯಾಗಿ, ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಸಾಲಿಗ್ರಾಮ ಠಾಣೆ ಇನ್ಸ್​ಪೆಕ್ಟರ್ ಕೃಷ್ಣರಾಜು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಆನಂದ್ ಹೊಗಾಡೆ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಸಜೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡದ ಪೂರ್ಣ ಹಣವನ್ನು ಪರಿಹಾರದ ರೂಪದಲ್ಲಿ ನೊಂದ ಬಾಲಕಿಗೆ ನೀಡಬೇಕು ಎಂದು ಆದೇಶಿಸಿದ್ದಾರೆ.

ABOUT THE AUTHOR

...view details