ಬೆಂಗಳೂರು:ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಎಎಸ್ಐ ಶಿವಶಂಕರ ಚಾರಿ(45) ಮೃತರು.
ಶಿವಶಂಕರ ಅವರು ಗುರುವಾರ ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್ಗೆ ಹೋದಾಗ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.