ಬೆಳಗಾವಿ: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳಿಗೆ ತೀವ್ರ ಹಾನಿಯಾಗಿದ್ದು, ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಿಸಲಾಗುತ್ತಿದೆ.
ಬೆಳಗಾವಿ-ಮೀರಜ್ ರೈಲು:ಪ್ರತಿದಿನ ಬೆಳಿಗ್ಗೆ 6.10ಕ್ಕೆ ಹೊರಟು 9.10ಕ್ಕೆ ಮೀರಜ್ ತಲುಪಲಿದೆ. ಮರಳಿ ಬೆಳಿಗ್ಗೆ 9.50ಕ್ಕೆ ಮೀರಜ್ನಿಂದ ಹೊರಟು ಮಧ್ಯಾಹ್ನ 12.50ಕ್ಕೆ ಬೆಳಗಾವಿ ತಲುಪುತ್ತದೆ.