ಕರ್ನಾಟಕ

karnataka

ಹಾವೇರಿಯಲ್ಲಿ ಬಸ್​ ಪಲ್ಟಿ, 15ಕ್ಕೂ ಹೆಚ್ಚು ಜನರಿಗೆ ಗಾಯ

By ETV Bharat Karnataka Team

Published : Sep 18, 2024, 9:03 AM IST

PEOPLE INJURED  BUS OVERTURNS  BUS ACCIDENT IN HAVERI  HAVERI
ಹಾವೇರಿಯಲ್ಲಿ ಬಸ್​ ಪಲ್ಟಿ, ಹಲವರಿಗೆ ಗಾಯ (ETV Bharat)

ಹಾವೇರಿ:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯ‌ಗಳಾದ ಘಟನೆ ಹಾವೇರಿ ಸಮೀಪದ ವರದಾಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾವೇರಿ ತಾಲ್ಲೂಕಿನ ವರದಾಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಬಸ್ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಹಾವೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಜಮೀನು ವಿಚಾರದಲ್ಲಿ ನಾಯಿ ಛೂ ಬಿಟ್ಟ ಪ್ರಕರಣ: ದಾಖಲೆ ಸಲ್ಲಿಸಲು ಹೈಕೋರ್ಟ್ ಸೂಚನೆ - High Court

ABOUT THE AUTHOR

...view details