ಕರ್ನಾಟಕ

karnataka

ETV Bharat / snippets

ಪೋಕ್ಸೊ ಕೇಸ್​: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

POCSO CASE
ಚಿಕ್ಕಬಳ್ಳಾಪುರ ನ್ಯಾಯಾಲಯ (ETV Bharat)

By ETV Bharat Karnataka Team

Published : Sep 4, 2024, 12:53 PM IST

ಚಿಕ್ಕಬಳ್ಳಾಪುರ:ಪೋಕ್ಸೋ ಪ್ರಕರಣ ಸಂಬಂಧ ಅಪರಾಧಿಯೊಬ್ಬನಿಗೆ ಸ್ಥಳೀಯ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಎಸ್​ಟಿಎಸ್​ಸಿ 1ನೇ ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾ ಕುಮಾರಿ.ಎನ್. ಅವರು ಈ ಆದೇಶ ಹೊರಡಿಸಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಗ್ರಾಮವೊಂದರ ಪಟೇಲ್ ಶಿಕ್ಷೆಗೊಳಗಾದ ವ್ಯಕ್ತಿ.

4 ವರ್ಷಗಳ ಹಿಂದೆ ಅಪ್ರಾಪ್ತೆಯನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗಿ ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ್ದ ಎಂದು ಆರೋಪಿ ಪಟೇಲ್ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಠಾಣೆಯ ಸಿಪಿಐ ಸುರೇಶ್.ಕೆ, ಈತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಇಂದು ತೀರ್ಪು ನೀಡಿದ ಎಸ್​ಟಿಎಸ್​ಸಿ 1ನೇ ನ್ಯಾಯಾಲಯವು ತಪ್ಪಿತಸ್ಥನಿಗೆ 20 ವರ್ಷಗಳ ಕಠಿಣ ಶಿಕ್ಷೆ, ಐದು ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ABOUT THE AUTHOR

...view details