ಕರ್ನಾಟಕ

karnataka

ETV Bharat / snippets

ಮೈಸೂರು: ಕಾಲೇಜಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಕಾಲೇಜಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ಕಾಲೇಜಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು (ETV Bharat)

By ETV Bharat Karnataka Team

Published : Jun 22, 2024, 5:12 PM IST

ಮೈಸೂರು: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಕಾಲೇಜಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಗರದ ಮಂಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಹಕ್‌ (19) ಮೃತ ವಿದ್ಯಾರ್ಥಿನಿ. ನಗರದ ಫಾರೂಖಿಯಾ ಡೆಂಟಲ್‌ ಕಾಲೇಜಿನಲ್ಲಿ ಲ್ಯಾಬ್‌ ಟೆಕ್ನಿಷಿಯನ್‌ಗೆ ಸಂಬಂಧಿಸಿದ ಕೋರ್ಸ್​​ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದರು. ಈ ಬಗ್ಗೆ ಕಾಲೇಜು ಮುಖ್ಯಸ್ಥರು, ಆಕೆಯ ಪೋಷಕರನ್ನ ಕರೆದು ವಿಚಾರ ತಿಳಿಸಿ ಮುಂದೆ ಒಳ್ಳೆ ಅಂಕ ಪಡೆಯುವಂತೆ ವಿದ್ಯಾರ್ಥಿನಿಗೆ ಬುದ್ಧಿ ಮಾತು ಹೇಳಿದ್ದರು. ಇದರಿಂದ ಮನನೊಂದ ವಿದ್ಯಾರ್ಥಿನಿ ಕಳೆದ ವಾರ ಕಾಲೇಜಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ನಗರದ ಮಿಷನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಸಂಜೆ ಮೃತಪಟ್ಟಿದಾಳೆ. ಈ ಸಂಬಂದ ನಗರದ ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details