ಕರ್ನಾಟಕ

karnataka

By ETV Bharat Karnataka Team

Published : Sep 24, 2024, 9:58 PM IST

ETV Bharat / snippets

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಡಿಸಿಎಂ, ಅಧಿಕಾರಿಗಳ ಅಮಾನತು

DCM ANNOUNCED COMPENSATION
ಬಾಲಕನ ಮೇಲೆ ಬಿದ್ದ ಕಬ್ಬಿಣದ ಗೇಟ್‌ (ETV Bharat)

ಬೆಂಗಳೂರು: ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್‌ ಬಿದ್ದು ಮೃತಪಟ್ಟಿದ್ದ ಬಾಲಕ ನಿರಂಜನ್‌ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಈ ಸಂಬಂಧ ಡಿಸಿಎಂ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ನಿರ್ಲಕ್ಷ್ಯ ತೋರಿರುವ ಸಹಾಯಕ ಇಂಜಿನಿಯರ್ ಶ್ರೀನಿವಾಸ್ ರಾಜು ಅವರ ಅಮಾನತಿಗೆ ಆದೇಶ ಮಾಡಲಾಗಿದ್ದು, ಸಹಾಯಕ ಕಾರ್ಯಪಾಲಕ ಇಂಜಿನಿಯರ್​ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಕಾರ್ಯಪಾಲಕ ಇಂಜಿನಿಯರ್ ಎಲ್.ವೆಂಕಟೇಶ್ ಅವರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗಿದೆ.

2021ರ ಮೇ 21 ರಂದು ಈ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು. ಘಟನೆಯ ನಂತರ ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಹಾಗೂ ಮೈದಾನ ನಿರ್ವಹಣೆಯಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ.

ಆಟದ ಮೈದಾನದ ಸಂಪೂರ್ಣ ಕಾಮಗಾರಿಯ ಕುರಿತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಒಂದು ವಾರದೊಳಗೆ ಪರಿಶೀಲಿಸಿ ಸಂಪೂರ್ಣ ವರದಿ ನೀಡುವಂತೆ ತಿಳಿಸಲಾಗಿದೆ.

ABOUT THE AUTHOR

...view details