ಧಾರವಾಡ:ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ನಿರಂತರವಾಗಿ ನಡೆಯುತ್ತಿರುವ ಕೊಲೆ ಸುಲಿಗೆ ಪ್ರಕರಣಗಳನ್ನು ಮಟ್ಟ ಹಾಕಲು ಪೊಲೀಸರು ನಿರತರಾಗಿದ್ದಾರೆ. ಇಂದು ಧಾರವಾಡದ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ವಿದ್ಯಾಗಿರಿ ಪೊಲೀಸ್ ಠಾಣೆ, ಶಹರ್ ಪೊಲೀಸ್ ಠಾಣೆ ಹಾಗೂ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ರೌಡಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಎಸಿಪಿ ಬಸವರಾಜ್ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ರೌಡಿಗಳ ಮನೆಗೆ ಹೋಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.