ಮಂಗಳೂರು:ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಗುರುವಾರವೂ ಶಾಲೆಗಳಿಗೆ ರಜೆ ಇದೆ ಎಂದು ದ.ಕ. ಜಿಲ್ಲಾಧಿಕಾರಿಯವರ ನಕಲಿ ಆದೇಶದ ಪ್ರತಿ ವೈರಲ್ ಆಗಿದ್ದು, ಎಫ್ಐಆರ್ ದಾಖಲಿಸಲಾಗುತ್ತದೆ ಎಂದು ಡಿಸಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.
ಜುಲೈ 18ರಂದು ಶಾಲೆಗಳಿಗೆ ರಜೆ ಘೋಷಿಸಿರಲಿಲ್ಲ. ಆದರೆ ಡಿಸಿಯವರೇ ರಜೆ ಘೋಷಿಸಿದ್ದಾರೆ ಎಂಬ ನಕಲಿ ಆದೇಶದ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ರಾತ್ರಿ ವೈರಲ್ ಆಗಿತ್ತು. ಇದು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾ ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿತ್ತು.