ಬೆಂಗಳೂರು:ಪಕ್ಕದ ಮನೆಯ ಬಾಲಕಿಗೆ ಚಾಕೊಲೇಟ್ ಕೊಡುವುದಾಗಿ ಕರೆದು ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಬೆಂಗಳೂರು ಹೊರವಲಯದ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
15 ವರ್ಷದ ಅಪ್ರಾಪ್ತೆಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ, ಆಕೆಯ ತಾಯಿ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.
ಕಳೆದ ಶುಕ್ರವಾರ ರಾತ್ರಿ ಊಟ ಮಾಡಿ ಮನೆಯಿಂದ ಹೊರಬಂದಿದ್ದ ಬಾಲಕಿಗೆ ಚಾಕೊಲೇಟ್ ಆರೋಪಿಗಳು ಕೊಡುವುದಾಗಿ ಪುಸಲಾಯಿಸಿ ಕರೆದಿದ್ದಾರೆ. ಒಪ್ಪದಿದ್ದಾಗ ಸಮೀಪದ ದೇವಸ್ಥಾನದ ಬಳಿ ಎಳೆದೊಯ್ದು ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಾಲಕಿ ಜೋರಾಗಿ ಕಿರುಚಿಕೊಂಡಾಗ ಆತಂಕಗೊಂಡು ಆಕೆಯನ್ನು ಬಿಟ್ಟು ಎಸ್ಕೇಪ್ ಆಗಿದ್ದರು ಎಂದು ದೂರು ನೀಡಲಾಗಿತ್ತು. ಈ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ