ಕರ್ನಾಟಕ

karnataka

ETV Bharat / snippets

371 ಜೆ ಅಡಿ ಉದ್ಯೋಗ ನೇಮಕಾತಿ ಗೊಂದಲ: ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

371 (ಜೆ)ಅಡಿ ನೇಮಕಾತಿ ಸಂಬಂಧ ಸಚಿವರಾದ ಪ್ರಿಯಾಂಕ್‌ ಖರ್ಗೆ, ಡಾ.ಶರಣಪ್ರಕಾಶ್‌ ಪಾಟೀಲ್‌ ಸಭೆ ನಡೆಸಿದರು.
371 (ಜೆ)ಅಡಿ ನೇಮಕಾತಿ ಸಂಬಂಧ ಸಚಿವರಾದ ಪ್ರಿಯಾಂಕ್‌ ಖರ್ಗೆ, ಡಾ.ಶರಣಪ್ರಕಾಶ್‌ ಪಾಟೀಲ್‌ ಸಭೆ ನಡೆಸಿದರು. (ETV Bharat)

By ETV Bharat Karnataka Team

Published : Jul 3, 2024, 9:16 PM IST

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 (ಜೆ)ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳ ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371 (ಜೆ) ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಉದ್ಯೋಗ ನೇಮಕಾತಿಗೆ ಸಂಬಂಧದ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೆ ಕೆಲವಾರು ಗೊಂದಲಗಳು ಉದ್ಭವಿಸುತ್ತಿವೆ. ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ, ಅಂತಿಮವಾಗಿ ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಂಬಂಧ ಸಲ್ಲಿಸಬೇಕು ಎಂದು ಪ್ರಿಯಾಂಕ್‌ ನಿರ್ದೇಶಿಸಿದರು. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಡಿ.ರಣ್‌ದೀಪ್‌, ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಕೆ.ರಾಕೇಶ್‌ ಕುಮಾರ್‌ ಇದ್ದರು.

ABOUT THE AUTHOR

...view details