ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ 'ಆಯ್ಕೆ' (Options) ಗಳನ್ನು ಬದಲಿಸಿಕೊಳ್ಳಲು/ ತೆಗೆದುಹಾಕಲು/ ಕ್ರಮಾಂಕ ಬದಲಿಸಿಕೊಳ್ಳಲು ಇದುವರೆಗೂ ನೀಡಿದ್ದ ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಕೊನೆಗೊಳಿಸಿದೆ.
CET, NEET: 2ನೇ ಸುತ್ತಿನ ಸೀಟು ಹಂಚಿಕೆಗೆ ಕೆಇಎ ತಯಾರಿ
Published : Sep 13, 2024, 6:17 PM IST
ಕೆಇಎ (ETV Bharat)
ಈ ಸಲುವಾಗಿ ತೆರೆದಿದ್ದ ಕೆಇಎ ಪೋರ್ಟಲ್ ಸ್ಥಗಿತಗೊಳಿಸಿದ್ದು, ಯಾವ ಬದಲಾವಣೆಗೂ ಅವಕಾಶ ಇರುವುದಿಲ್ಲ. ಈ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಪೂರ್ವ ತಯಾರಿ ಆರಂಭಿಸಿದಂತಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:SSLC ಅರ್ಧವಾರ್ಷಿಕ ಪರೀಕ್ಷೆಗೆ ಟೈಂ ಕಡಿತ ಇಲ್ಲ: 15 ನಿಮಿಷ ಹೆಚ್ಚುವರಿ ಸಮಯ ಮುಂದುವರಿಕೆ - SSLC Midterm Exam