ಕರ್ನಾಟಕ

karnataka

ETV Bharat / snippets

ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

KISHORE KUMAR PUTTUR TAKES OATH
ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ (ETV Bharat)

By ETV Bharat Karnataka Team

Published : 12 hours ago

ಬೆಂಗಳೂರು :ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ವೇಳೆ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಪರಿಷತ್‍ನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಸೇರಿದಂತೆ ಶಾಸಕರು, ವಿಧಾನಪರಿಷತ್‍ನ ಸದಸ್ಯರು ಉಪಸ್ಥಿತರಿದ್ದರು.

ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅ.21 ರಂದು ಈ ಚುನಾವಣೆ ನಡೆದಿತ್ತು. ಕಿಶೋರ್ ಕುಮಾರ್ 1600ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದು, ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್​​ನ ರಾಜು ಪೂಜಾರಿ ಪರಾಭವಗೊಂಡಿದ್ದರು.

ಇದನ್ನೂ ಓದಿ: ದಕ್ಷಿಣ ಕನ್ನಡ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್​ಗೆ ಗೆಲುವು

ABOUT THE AUTHOR

...view details