ಕರ್ನಾಟಕ

karnataka

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಬೈಕ್​ನಲ್ಲಿ 4 ಕೆ.ಜಿ‌ ಗಾಂಜಾ ಸಾಗಿಸುತ್ತಿದ್ದವ ಅರೆಸ್ಟ್​

By ETV Bharat Karnataka Team

Published : 10 hours ago

Published : 10 hours ago

marijuana
ಆರೋಪಿ (ETV Bharat)

ಮಂಗಳೂರು:ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು, 4 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಅಬುತಾಹಿರ್ (25) ಬಂಧಿತ ಆರೋಪಿ.

ಮಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್​ನಲ್ಲಿ ಆರೋಪಿ ಬಂಧಿಸಿದ್ದಾರೆ. ಅಬುತಾಹಿರ್ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ಲಕ್ಷ ರೂ. ಮೌಲ್ಯದ 4 ಕೆಜಿ ಗಾಂಜಾ, ಸಾಗಾಟಕ್ಕೆ ಉಪಯೋಗಿಸಿದ ಬೈಕ್​ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಒಟ್ಟು ಆಂದಾಜು 1,75,000 ರೂ. ಮೌಲ್ಯ ಸೊತ್ತು ವಶಕ್ಕೆ ಪಡೆದಿರುವ ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ., ಪಿಎಸ್ಐ ನರೇಂದ್ರ, ಎಎಸ್ಐ ಮೋಹನ್ ಕೆ.ವಿ., ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ABOUT THE AUTHOR

...view details